ಆದಿಕಾಂಡ 43:9 - ಪರಿಶುದ್ದ ಬೈಬಲ್9 ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ, ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು. ಅಧ್ಯಾಯವನ್ನು ನೋಡಿ |
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.