Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:13 - ಪರಿಶುದ್ದ ಬೈಬಲ್‌

13 ಸಹೋದರರು ತುಂಬ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ಚೀಲಗಳನ್ನು ಮತ್ತೆ ಕತ್ತೆಗಳ ಮೇಲೇರಿಸಿಕೊಂಡು ನಗರಕ್ಕೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಿದರು; ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸಿಕ್ಕಿದಾಗ ಅವರು [ದುಃಖಾಕ್ರಾಂತರಾಗಿ] ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು, ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಕೊಂಡು ಪಟ್ಟಣಕ್ಕೆ ಮರಳಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:13
7 ತಿಳಿವುಗಳ ಹೋಲಿಕೆ  

ಆಗ ದಾವೀದನು ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲ ಹರಿದುಕೊಂಡನು. ದಾವೀದನ ಜೊತೆಯಲ್ಲಿದ್ದವರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.


ಮೂರನೆಯ ದಿನ ಒಬ್ಬ ಯುವ ಸೈನಿಕನು ಚಿಕ್ಲಗಿಗೆ ಬಂದನು. ಈ ಮನುಷ್ಯನು ಸೌಲನಿದ್ದ ಪಾಳೆಯದಿಂದ ಬಂದವನು. ಅವನು ಬಟ್ಟೆಗಳೆಲ್ಲವನ್ನು ಹರಿದುಕೊಂಡಿದ್ದನು; ತಲೆಯ ಮೇಲೆ ಧೂಳನ್ನು ಹಾಕಿಕೊಂಡಿದ್ದನು. ಅವನು ದಾವೀದನ ಬಳಿಗೆ ಬಂದು ಅವನ ಮುಂದೆ, ತನ್ನ ತಲೆಯನ್ನು ನೆಲಕ್ಕೆ ಬಾಗಿಸಿ ನಮಸ್ಕರಿಸಿದನು.


ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?


ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು