ಆದಿಕಾಂಡ 44:16 - ಪರಿಶುದ್ದ ಬೈಬಲ್16 ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?" ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮಗೆ ತಿಳಿಯಲಿಲ್ಲವೋ ಎಂದು ಕೇಳಲು ಯೆಹೂದನು - ನಾವು ನಮ್ಮ ಸ್ವಾವಿುಗೆ ಏನು ಹೇಳೋಣ? ನಾವು ಹೇಗೆ ಮಾತಾಡೇವು? ನಾವು ನಿರ್ದೋಷಿಗಳಾಗಿ ತೋರುವಂತೆ ಏನು ಮಾಡಬೇಕು? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ಗುಲಾಮರಾದೆವಲ್ಲವೇ ಅನ್ನಲು ಯೋಸೇಫನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿ |
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.