Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:18 - ಪರಿಶುದ್ದ ಬೈಬಲ್‌

18 ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ; ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:18
19 ತಿಳಿವುಗಳ ಹೋಲಿಕೆ  

ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.


ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.


ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.


ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು ಮಾಡುವೆನು. ಆದರೆ ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟಿನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು.


ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.


“ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.


“ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ.


ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.


ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?


“ಯೋಬನೇ, ನನ್ನ ಮಾತುಗಳಿಗೆ ಗಮನಕೊಟ್ಟು ಕೇಳು, ಮೌನವಾಗಿರು. ನಾನು ಮಾತಾಡುವೆನು.


ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು.


ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಾನು ನಿನಗೆ ಕೆಲವು ಮಾತುಗಳನ್ನು ಹೇಳಲು ಬಿಡು” ಎಂದಳು. “ಹೇಳು” ಎಂದು ರಾಜನು ಹೇಳಿದನು.


ನಾವೆಲ್ಲರು ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದುನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದುನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು.


ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.


ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.


ಯೋಸೇಫನು ಅವರಿಗೆ, “ನನಗೆ ಒಂದು ಕನಸಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು