ಆದಿಕಾಂಡ 44:29 - ಪರಿಶುದ್ದ ಬೈಬಲ್29 ನೀವು ನನ್ನ ಮತ್ತೊಬ್ಬ ಮಗನನ್ನು ನನ್ನ ಬಳಿಯಿಂದ ಕರೆದುಕೊಂಡು ಹೋಗುವಾಗ ಅವನಿಗೆ ಏನಾದರೂ ಸಂಭವಿಸಿದರೆ, ನಾನು ದುಃಖ ತಾಳಲಾರದೆ ಸತ್ತುಹೋಗುವೆನು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣರಾಗುವಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಅವನಿಗೂ ಕೇಡು ಬಂದರೆ, ನನ್ನ ಮುದಿ ತಲೆಯು ದುಃಖದಿಂದ ಸಮಾಧಿಗೆ ಇಳಿಯುವಂತೆ ಮಾಡುವಿರಿ,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |