Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:32 - ಪರಿಶುದ್ದ ಬೈಬಲ್‌

32 “ನಾನು ಈ ಯುವಕನ ಜವಾಬ್ದಾರಿಯನ್ನು ವಹಿಸಿಕೊಂಡೆನು. ನಾನು ನನ್ನ ತಂದೆಗೆ, ‘ನಾನು ಇವನನ್ನು ಹಿಂದಕ್ಕೆ ಕರೆದುಕೊಂಡು ಬರದಿದ್ದರೆ ನನ್ನ ಜೀವಮಾನವೆಲ್ಲಾ ನೀನು ನನ್ನನ್ನು ದೂಷಿಸಬಹುದು’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿದ್ದೇನೆ. ‘ನಾನು ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬಾರದಿದ್ದರೆ, ತಂದೆಗೆ ತಪ್ಪಿದವನ ದೋಷ ಸದಾಕಾಲ ನನ್ನದಾಗಲಿ’ ಎಂದು ಮಾತುಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ - ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದಿದ್ದರೆ ತಂದೆಗೆ ತಪ್ಪಿದವನ ದೋಷ ಎಂದೆಂದಿಗೂ ನನಗಿರಲಿ ಎಂದು ಮಾತು ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ನಿನ್ನ ದಾಸನಾದ ನಾನು, ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆಯಾಗಿ, ‘ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆನು,’ ಎಂದು ಹೇಳಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:32
3 ತಿಳಿವುಗಳ ಹೋಲಿಕೆ  

ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು.


ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು