ಆದಿಕಾಂಡ 44:34 - ಪರಿಶುದ್ದ ಬೈಬಲ್34 ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗುವದಕ್ಕಾದೀತು? ತಂದೆಗೆ ಮಹಾ ಶೋಕವುಂಟಾಗುವದನ್ನು ನಾನು ನೋಡಕೂಡದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.