ಆದಿಕಾಂಡ 44:4 - ಪರಿಶುದ್ದ ಬೈಬಲ್4 ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ ಯೋಸೇಫನು ತನ್ನ ಮನೆವಾರ್ತೆಯವನಿಗೆ - ನೀನೆದ್ದು ಆ ಮನುಷ್ಯರನ್ನು ಹಿಂದಟ್ಟಿ ಸಂಧಿಸಿ - ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮುಂಚೆ ಯೋಸೇಫನು ಮನೆಯ ಗೃಹನಿರ್ವಾಹಕನಿಗೆ, “ಆ ಮನುಷ್ಯರ ಹಿಂದೆ ಹೋಗು. ಅವರು ಸಿಕ್ಕಿದಾಗ, ‘ಏಕೆ ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಿದಿರಿ? ಅಧ್ಯಾಯವನ್ನು ನೋಡಿ |