ಆದಿಕಾಂಡ 44:5 - ಪರಿಶುದ್ದ ಬೈಬಲ್5 ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಪಾತ್ರೆಯಿಂದಲೆ ಅಲ್ಲವೆ ನನ್ನ ದಣಿ ಪಾನಮಾಡುವುದು? ಅದರಲ್ಲಿ ನೋಡೇ ಅಲ್ಲವೆ ಶಕುನ ಹೇಳುವುದು? ನೀವು ಮಾಡಿರುವುದು ಮಹಾ ನೀಚತನ, ಎನ್ನಬೇಕು,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ. ಅದರಲ್ಲಿ ನೋಡಿ ಶಕುನ ಹೇಳುವದಿಲ್ಲವೇ. ನೀವು ಮಾಡಿದ್ದು ಬಹಳ ಕೆಟ್ಟದ್ದು ಅನ್ನಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು. ಅಧ್ಯಾಯವನ್ನು ನೋಡಿ |
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
ರಾಜನಾದ ಅಹಾಬನು ತಾನು ಬೆನ್ಹದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ಹದದನ ಜನರು ಅಪೇಕ್ಷೆಪಟ್ಟಿದ್ದರು. ಅಹಾಬನು ಬೆನ್ಹದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಹೌದು! ಬೆನ್ಹದದನು ನಿನ್ನ ಸೋದರನೇ” ಎಂದರು. ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ಹದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು.