ಆದಿಕಾಂಡ 44:8 - ಪರಿಶುದ್ದ ಬೈಬಲ್8 ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮೊದಲು ನಮ್ಮ ಚೀಲಗಳ ಬಾಯಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ನಾಡಿನಿಂದ ವಾಪಸ್ಸು ತಂದು ನಿಮಗೆ ಕೊಟ್ಟೆವಲ್ಲವೆ? ಹೀಗಿರುವಾಗ ನಾವು ನಿಮ್ಮ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರ ಕದಿಯುವುದುಂಟೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್‍ದೇಶದಿಂದ ತಿರಿಗಿ ತಂದು ನಿನಗೆ ಕೊಟ್ಟೆವಲ್ಲವೇ. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು? ಅಧ್ಯಾಯವನ್ನು ನೋಡಿ |