ಆದಿಕಾಂಡ 45:1 - ಪರಿಶುದ್ದ ಬೈಬಲ್1 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಲಾರದೆ - ನನ್ನ ಬಳಿಯಿಂದ ಎಲ್ಲರನ್ನೂ ಆಚೆಗೆ ಕಳುಹಿಸಿರಿ ಎಂದು ಬಾಯಿಬಿಟ್ಟು ಹೇಳಿದನು. ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಇತರರು ಯಾರೂ ಹತ್ತರ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿಹಿಡಿದುಕೊಳ್ಳಲು ಆಗಲಿಲ್ಲ. “ಎಲ್ಲರನ್ನೂ ತನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ,” ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪರಿಚಯಿಸಿಕೊಳ್ಳಲು ಹೋದಾಗ, ಅಲ್ಲಿ ಬೇರೆ ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.