ಆದಿಕಾಂಡ 45:10 - ಪರಿಶುದ್ದ ಬೈಬಲ್10 ನೀನು ಗೋಷೆನ್ ಪ್ರಾಂತ್ಯದಲ್ಲಿ ನನ್ನೊಂದಿಗೆ ವಾಸಿಸುವೆ. ನೀನೂ ನಿನ್ನ ಮಕ್ಕಳೂ ನಿನ್ನ ಮೊಮ್ಮಕ್ಕಳೂ ನಿಮ್ಮ ಎಲ್ಲಾ ಪಶುಗಳೊಡನೆ ಇಲ್ಲಿ ನೆಲೆಸಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು; ನೀನೂ ನಿನ್ನ ಮಕ್ಕಳೂ ಮೊಮ್ಮಕ್ಕಳೂ ಕುರಿ ದನ ಮೊದಲಾದ ಸ್ವಾಸ್ತ್ಯಸಹಿತರಾಗಿ ನನ್ನ ಬಳಿಯಲ್ಲೇ ಇರಬಹುದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು. ಅಧ್ಯಾಯವನ್ನು ನೋಡಿ |
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.