Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:12 - ಪರಿಶುದ್ದ ಬೈಬಲ್‌

12 ಯೋಸೇಫನು ತನ್ನ ಸಹೋದರರೊಂದಿಗೆ ಮಾತನ್ನು ಮುಂದುವರಿಸಿ, “ನಾನೇ ಯೋಸೇಫನೆಂದು ನಿಮಗೆ ಈಗ ಗೊತ್ತಾಗಿದೆ; ನಿಮ್ಮ ತಮ್ಮನಾದ ಬೆನ್ಯಾಮೀನನಿಗೂ ಗೊತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನಾನೇ ಖುದ್ದಾಗಿ ನಿಮ್ಮ ಸಂಗಡ ಮಾತಾಡಿದ್ದೇನೆ; ಅದಕ್ಕೆ ನೀವೂ ಸಾಕ್ಷಿ: ನನ್ನ ಒಡಹುಟ್ಟಿದ ಬೆನ್ಯಾಮೀನನೂ ಸಾಕ್ಷಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಸ್ವತಃ ನಿಮ್ಮ ಸಂಗಡ ಮಾತಾಡಿದ್ದೇನಲ್ಲಾ; ಅದಕ್ಕೆ ನೀವೇ ಸಾಕ್ಷಿ, ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನಿಮ್ಮ ಸಂಗಡ ಮಾತನಾಡುವುದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ, ನನ್ನ ಸಹೋದರ ಬೆನ್ಯಾಮೀನನ ಕಣ್ಣುಗಳೂ ನೋಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:12
5 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.


ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು.


ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.


ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.


ಆದ್ದರಿಂದ ಈಜಿಪ್ಟಿನಲ್ಲಿರುವ ಮಹಾ ಐಶ್ವರ್ಯವನ್ನೂ ನೀವು ಇಲ್ಲಿ ನೋಡಿರುವ ಪ್ರತಿಯೊಂದನ್ನೂ ನನ್ನ ತಂದೆಗೆ ತಿಳಿಸಿ ಬೇಗನೆ ಅವನನ್ನು ಕರೆದುಕೊಂಡು ಬನ್ನಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು