ಆದಿಕಾಂಡ 45:18 - ಪರಿಶುದ್ದ ಬೈಬಲ್18 ನಿನ್ನ ತಂದೆಯನ್ನೂ ತಮ್ಮ ಕುಟುಂಬಗಳನ್ನೂ ನನ್ನ ಬಳಿಗೆ ಕರೆದುಕೊಂಡು ಬರಲಿ. ಅವರು ಈಜಿಪ್ಟಿನ ಒಳ್ಳೆಯ ಪ್ರದೇಶದಲ್ಲಿ ವಾಸಿಸಲಿ. ಇಲ್ಲಿರುವ ಉತ್ತಮವಾದ ಆಹಾರವನ್ನು ಅವರು ಊಟಮಾಡಲಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ತಂದೆಯನ್ನೂ ಕುಟುಂಬದವರನ್ನೂ ನನ್ನ ಬಳಿಗೆ ಕರೆದುಕೊಂಡು ಬರತಕ್ಕದ್ದು. ಈಜಿಪ್ಟ್ ದೇಶದಲ್ಲಿ ನಿಮಗೆ ಅತ್ಯುತ್ತಮವಾದ ಭೂಮಿಯನ್ನು ಕೊಡುವೆನು. ನೀವು ಈ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರಕೊಂಡು ಬನ್ನಿರಿ; ಐಗುಪ್ತದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು, ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’ ಅಧ್ಯಾಯವನ್ನು ನೋಡಿ |
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.