Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:19 - ಪರಿಶುದ್ದ ಬೈಬಲ್‌

19 ಅವರು ನಮ್ಮ ಶ್ರೇಷ್ಠವಾದ ರಥಗಳನ್ನು ತೆಗೆದುಕೊಂಡು ಕಾನಾನ್ ದೇಶಕ್ಕೆ ಹೋಗಿ ನಿನ್ನ ತಂದೆಯನ್ನೂ ಎಲ್ಲಾ ಸ್ತ್ರೀಯರನ್ನೂ ಮಕ್ಕಳನ್ನೂ ಕರೆದುಕೊಂಡು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:19
8 ತಿಳಿವುಗಳ ಹೋಲಿಕೆ  

ಆಮೇಲೆ ಯಾಕೋಬನು ಬೇರ್ಷೆಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡುಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು.


ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ದೂರದೇಶದಲ್ಲಿರುವ ಜನರೇ, ನನ್ನ ಮಾತುಗಳಿಗೆ ಕಿವಿಗೊಡಿರಿ; ಭೂಮಿಯ ಮೇಲೆ ವಾಸಿಸುವ ಜನರೇ, ನನ್ನ ಮಾತುಗಳನ್ನು ಕೇಳಿರಿ. ನಾನು ಹುಟ್ಟುವ ಮೊದಲೇ ಯೆಹೋವನು ನನ್ನನ್ನು ತನ್ನ ಸೇವೆಗಾಗಿ ಕರೆದನು. ನಾನು ತಾಯಿಯ ಗರ್ಭದಲ್ಲಿರುವಾಗಲೇ ಯೆಹೋವನು ನನ್ನ ಹೆಸರೆತ್ತಿ ಕರೆದನು.


ಅವರ ಸ್ವತ್ತುಗಳ ಬಗ್ಗೆ ಚಿಂತಿಸುವುದು ಬೇಡ; ಈಜಿಪ್ಟಿನಲ್ಲಿ ನಮಗಿರುವ ಉತ್ತಮವಾದವುಗಳನ್ನು ಅವರಿಗೆ ಕೊಡೋಣ” ಎಂದು ಹೇಳಿದನು.


ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.


ಗೋತ್ರಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು