ಆದಿಕಾಂಡ 45:20 - ಪರಿಶುದ್ದ ಬೈಬಲ್20 ಅವರ ಸ್ವತ್ತುಗಳ ಬಗ್ಗೆ ಚಿಂತಿಸುವುದು ಬೇಡ; ಈಜಿಪ್ಟಿನಲ್ಲಿ ನಮಗಿರುವ ಉತ್ತಮವಾದವುಗಳನ್ನು ಅವರಿಗೆ ಕೊಡೋಣ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಐಗುಪ್ತ ದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮದೇ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'." ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಐಗುಪ್ತದೇಶದಲ್ಲೆಲ್ಲಾ ಇರುವ ಉತ್ತಮ ವಸ್ತುಗಳು ನಿಮ್ಮ ಪಾಲಿಗೆ ಬಂದದರಿಂದ ನಿಮಗಿರುವ ಸೊತ್ತಿನ ವಿಷಯ ಚಿಂತೆಪಡಬೇಕಾದ ಅವಶ್ಯವಿಲ್ಲ ಎಂಬದೇ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಈಜಿಪ್ಟ್ ದೇಶದಲ್ಲಿರುವ ಉತ್ತಮವಾದದ್ದೆಲ್ಲಾ ನಿಮ್ಮದೇ,’ ” ಎಂದನು. ಅಧ್ಯಾಯವನ್ನು ನೋಡಿ |
ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲಿ ಕನಿಕರವನ್ನಾಗಲಿ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.