Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:28 - ಪರಿಶುದ್ದ ಬೈಬಲ್‌

28 ಇಸ್ರೇಲನು, “ಈಗ ನಾನು ನಿಮ್ಮನ್ನು ನಂಬುತ್ತೇನೆ. ನನ್ನ ಮಗನಾದ ಯೋಸೇಫನು ಇನ್ನೂ ಬದುಕಿದ್ದಾನೆ. ನಾನು ಸಾಯುವ ಮೊದಲು ಅವನನ್ನು ನೋಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕೊನೆಗೆ ಯಕೋಬನು, “ನನ್ನ ಮಗ ಜೋಸೆಫ್ ಜೀವದಿಂದಿದ್ದಾನೆ, ನನಗೆ ಅಷ್ಟೇ ಸಾಕು! ನಾನು ಸಾಯುವುದಕ್ಕೆ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸಾಕು, ನನ್ನ ಮಗನಾದ ಯೋಸೇಫನು ಸಜೀವನಾಗಿದ್ದಾನೆ; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:28
5 ತಿಳಿವುಗಳ ಹೋಲಿಕೆ  

ಆಗ ಇಸ್ರೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ಕಣ್ಣಾರೆ ಕಂಡದ್ದರಿಂದ ನೀನು ಬದುಕಿರುವುದು ನನಗೆ ನಿಶ್ಚಯವಾಯಿತು. ನಾನು ಈಗ ಸಮಾಧಾನದಿಂದ ಸಾಯವೆನು” ಎಂದು ಹೇಳಿದನು.


ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.


ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು