Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:4 - ಪರಿಶುದ್ದ ಬೈಬಲ್‌

4 ಯೋಸೇಫನು ಮತ್ತೆ ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿ. ನನ್ನ ಹತ್ತಿರ ಬನ್ನಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಆದ್ದರಿಂದ ಸಹೋದರರು ಯೋಸೇಫನ ಹತ್ತಿರ ಹೋದರು. ಯೋಸೇಫನು ಅವರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನೀವು ಈಜಿಪ್ಟಿನವರಿಗೆ ಯಾವನನ್ನು ಗುಲಾಮನನ್ನಾಗಿ ಮಾರಿದಿರೋ ಅವನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ" ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೋಸೇಫನು - ನನ್ನ ಹತ್ತರಕ್ಕೆ ಬನ್ನಿರಿ ಎಂದು ತನ್ನಣ್ಣಂದಿರಿಗೆ ಹೇಳಲು ಅವರು ಹತ್ತರಕ್ಕೆ ಬಂದರು. ಅವನು ಅವರಿಗೆ - ಐಗುಪ್ತದೇಶಕ್ಕೆ ಸೇರುವಂತೆ ನೀವು ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೋಸೇಫನು ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿರಿ,” ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು, “ನೀವು ಈಜಿಪ್ಟಿಗೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:4
5 ತಿಳಿವುಗಳ ಹೋಲಿಕೆ  

ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.


ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!


ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.


ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.


“ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು