ಆದಿಕಾಂಡ 45:8 - ಪರಿಶುದ್ದ ಬೈಬಲ್8 ನನ್ನನ್ನು ಇಲ್ಲಿಗೆ ಕಳುಹಿಸಿದ್ದು ನಿಮ್ಮ ತಪ್ಪಲ್ಲ. ಅದು ದೇವರ ಯೋಜನೆ. ದೇವರು ನನ್ನನ್ನು ಫರೋಹನ ಅತ್ಯುನ್ನತವಾದ ಅಧಿಕಾರಿಯನ್ನಾಗಿ ಮಾಡಿದ್ದಾನೆ. ನಾನು ಅವನ ಮನೆಗೆಲ್ಲಾ ಮತ್ತು ಈಜಿಪ್ಟಿಗೆಲ್ಲಾ ರಾಜ್ಯಪಾಲನಾಗಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ; ಆತನು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |