ಆದಿಕಾಂಡ 45:9 - ಪರಿಶುದ್ದ ಬೈಬಲ್9 ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಈ ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀವು ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವರಿಗೆ, ‘ನಿಮ್ಮ ಮಗ ಜೋಸೆಫ್ ಹೀಗೆನ್ನುತ್ತಾನೆ; ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದಾರೆ. ನೀವು ತಡಮಾಡದೆ ನನ್ನ ಬಳಿಗೆ ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ನಿನ್ನ ಮಗನಾದ ಯೋಸೇಫನು ಹೀಗನ್ನುತ್ತಾನೆ - ದೇವರು ನನ್ನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇವಿುಸಿದ್ದಾನೆ; ನೀನು ತಡಮಾಡದೆ ನನ್ನ ಬಳಿಗೆ ಬಾ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ, ‘ನಿನ್ನ ಮಗ ಯೋಸೇಫನನ್ನು ದೇವರು ಈಜಿಪ್ಟಿಗೆಲ್ಲಾ ಪ್ರಭುವನ್ನಾಗಿ ಮಾಡಿದ್ದಾರೆ, ತಡಮಾಡದೆ ನನ್ನ ಬಳಿಗೆ ಬೇಗ ಬಾ. ಅಧ್ಯಾಯವನ್ನು ನೋಡಿ |