ಆದಿಕಾಂಡ 46:20 - ಪರಿಶುದ್ದ ಬೈಬಲ್20 ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ “ಆಸನತ್” ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಫೋಟೀಫರನ ಮಗಳು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಐಗುಪ್ತದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಆಚಾರ್ಯನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಎಫ್ರಾಯೀಮ್; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು. ಅಧ್ಯಾಯವನ್ನು ನೋಡಿ |
ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.