Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:26 - ಪರಿಶುದ್ದ ಬೈಬಲ್‌

26 ಯಾಕೋಬನಿಂದಲೇ ಹುಟ್ಟಿದ ಅರವತ್ತಾರು ಮಂದಿ ಈಜಿಪ್ಟಿಗೆ ಹೋದರು. (ಯಾಕೋಬನ ಸೊಸೆಯರನ್ನು ಇಲ್ಲಿ ಸೇರಿಸಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯಕೋಬನ ಸೊಸೆಯರಲ್ಲದೆ ಯಕೋಬನಿಂದಲೇ ಹುಟ್ಟಿ ಅವನೊಂದಿಗೆ ಈಜಿಪ್ಟ್ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಾಕೋಬನ ಸೊಸೆಯರಲ್ಲದೆ ಯಾಕೋಬನಿಂದಲೇ ಹುಟ್ಟಿ ಅವನೊಂದಿಗೆ ಐಗುಪ್ತದೇಶಕ್ಕೆ ಹೋದವರು ಒಟ್ಟು ಅರುವತ್ತಾರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:26
7 ತಿಳಿವುಗಳ ಹೋಲಿಕೆ  

ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.)


ಗಿದ್ಯೋನನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವನಿಗೆ ಅನೇಕ ಹೆಂಡತಿಯರಿದ್ದರು.


ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.


ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು.


ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.


ಯಾಕೋಬನು (ಇಸ್ರೇಲನು) ತನ್ನ ಗಂಡುಮಕ್ಕಳೊಂದಿಗೆ ಈಜಿಪ್ಟಿಗೆ ಪ್ರಯಾಣ ಮಾಡಿದನು; ತಮ್ಮ ಕುಟುಂಬಗಳೊಡನೆ ಹೋದ ಅವನ ಗಂಡುಮಕ್ಕಳು ಯಾರೆಂದರೆ:


ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು