ಆದಿಕಾಂಡ 46:3 - ಪರಿಶುದ್ದ ಬೈಬಲ್3 ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”