Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:17 - ಪರಿಶುದ್ದ ಬೈಬಲ್‌

17 ಆದ್ದರಿಂದ ಜನರು ತಮ್ಮ ದನಕರುಗಳನ್ನೂ ಕುದುರೆಗಳನ್ನೂ ಇತರ ಎಲ್ಲಾ ಪಶುಗಳನ್ನೂ ಕೊಟ್ಟು ಆಹಾರವನ್ನು ಕೊಂಡುಕೊಂಡರು. ಆ ವರ್ಷ ಯೋಸೇಫನು ಅವರಿಗೆ ಆಹಾರವನ್ನು ಕೊಟ್ಟು ಅವರ ಪಶುಗಳನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ತಮ್ಮ ಪಶುಪ್ರಾಣಿಗಳನ್ನು ಜೋಸೆಫನ ಬಳಿಗೆ ತಂದರು. ಅವನು ಅವರ ಕುದುರೆಗಳನ್ನೂ ದನಕುರಿಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯ ಕೊಡಿಸಿದನು. ಹೀಗೆ ಆ ವರ್ಷ ಅವರ ಪಶುಪ್ರಾಣಿಗಳನ್ನು ಪಡೆದು, ಧಾನ್ಯಕೊಟ್ಟು ಅವರನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತರಲು ಅವನು ಅವರ ಕುದುರೆಗಳನ್ನೂ ಕುರಿದನಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಡಿಸಿದನು. ಆ ವರುಷದಲ್ಲಿ ಅವರ ದನಕುರಿಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ತಮ್ಮ ಪಶುಗಳನ್ನೆಲ್ಲಾ ಯೋಸೇಫನ ಬಳಿಗೆ ತಂದರು. ಅವುಗಳ ಬದಲಾಗಿ ಅವನು ಆಹಾರ ಧಾನ್ಯ ಕೊಟ್ಟನು. ಅವರ ಕುದುರೆಗಳನ್ನೂ ಕುರಿಗಳನ್ನೂ ಆಡುಗಳನ್ನೂ ದನಗಳನ್ನೂ ಕತ್ತೆಗಳನ್ನೂ ಬದಲಾಗಿ ತೆಗೆದುಕೊಂಡನು. ಆ ವರ್ಷ ಅವರು ಆಹಾರಕ್ಕಾಗಿ ತಮ್ಮ ಎಲ್ಲಾ ಪಶುಪ್ರಾಣಿಗಳನ್ನು ಮಾರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:17
7 ತಿಳಿವುಗಳ ಹೋಲಿಕೆ  

“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ಸಹಾಯಕ್ಕಾಗಿ ಈಜಿಪ್ಟಿಗೆ ಹೋಗುವ ಜನರನ್ನು ನೋಡಿರಿ. ಆ ಜನರು ಕುದುರೆಗಳಿಗಾಗಿ ಕೇಳುತ್ತಿದ್ದಾರೆ. ಕುದುರೆಗಳು ಅವರನ್ನು ರಕ್ಷಿಸುತ್ತವೆ ಎಂದು ಅವರು ಭಾವಿಸುತ್ತಾರೆ. ಈಜಿಪ್ಟಿನ ಬಹಳ ರಥಗಳು ಮತ್ತು ಬಹಳ ಕುದುರೆಗಳು ಅವರನ್ನು ಕಾಪಾಡುವವು ಎಂದು ಜನರು ತಿಳಿದುಕೊಳ್ಳುತ್ತಾರೆ. ಸೈನ್ಯವು ದೊಡ್ಡದಾಗಿರುವದರಿಂದ ಯಾವ ಅಪಾಯವೂ ಬಾರದು ಎಂದು ಅವರು ತಿಳಿದುಕೊಳ್ಳುತ್ತಾರೆ. ಜನರು ಇಸ್ರೇಲಿನ ಪರಿಶುದ್ಧನನ್ನು ನಂಬುವದಿಲ್ಲ. ಅವರು ಯೆಹೋವನ ಸಹಾಯವನ್ನು ಕೋರುವದಿಲ್ಲ.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ಸೊಲೊಮೋನನು ಈಜಿಪ್ಟ್ ಮತ್ತು ಕ್ಯೂ ಪ್ರದೇಶಗಳಿಂದ ಕುದುರೆಗಳನ್ನು ಖರೀದಿಸಿ ಆಮದು ಮಾಡಿಕೊಂಡನು. ಅವನ ವ್ಯಾಪಾರಿಗಳು ಅವುಗಳನ್ನು ಕ್ಯೂ ಪ್ರಾಂತ್ಯದಿಂದ ಇಸ್ರೇಲಿಗೆ ತರುತ್ತಿದ್ದರು.


ನಾನು ಕೈಯೆತ್ತಿ ಹೊಲಗಳಲ್ಲಿರುವ ನಿನ್ನ ಪಶುಗಳನ್ನೂ ನಿನ್ನ ಎಲ್ಲಾ ಕುದುರೆಗಳನ್ನೂ ಕತ್ತೆಗಳನ್ನೂ ಒಂಟೆಗಳನ್ನೂ ದನಕರುಗಳನ್ನೂ ಕುರಿಗಳನ್ನೂ ಘೋರವ್ಯಾದಿಯಿಂದ ಸಾಯಿಸುವೆನು.


ಅದಕ್ಕೆ ಯೋಸೇಫನು, “ನಿಮ್ಮ ದನಕರುಗಳನ್ನು ನನಗೆ ಕೊಡಿರಿ, ನಾನು ನಿಮಗೆ ಆಹಾರವನ್ನು ಕೊಡುತ್ತೇನೆ” ಎಂದು ಉತ್ತರಿಸಿದನು.


ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು