ಆದಿಕಾಂಡ 47:18 - ಪರಿಶುದ್ದ ಬೈಬಲ್18 ಆದರೆ ಮುಂದಿನ ವರ್ಷ, ಪಶುಗಳನ್ನು ಕೊಟ್ಟು ಆಹಾರವನ್ನು ಕೊಂಡುಕೊಳ್ಳಲು ಜನರ ಬಳಿ ಪಶುಗಳಿರಲಿಲ್ಲ. ಆದ್ದರಿಂದ ಜನರು ಯೋಸೇಫನಲ್ಲಿಗೆ ಹೋಗಿ, “ನಮ್ಮಲ್ಲಿ ಹಣ ಇಲ್ಲವೆಂಬುದು ನಿನಗೆ ಗೊತ್ತೇ ಇದೆ. ಅಲ್ಲದೆ ನಮ್ಮ ಪಶುಗಳೂ ನಿನ್ನ ಸ್ವತ್ತಾಗಿವೆ. ಆದ್ದರಿಂದ ನಮ್ಮಲ್ಲಿ ಏನೂ ಉಳಿದಿಲ್ಲ. ನೀನು ನೋಡುತ್ತಿರುವ ನಮ್ಮ ಶರೀರ ಮತ್ತು ನಮ್ಮ ಜಮೀನು ಮಾತ್ರ ಉಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ವರ್ಷ ಕಳೆದ ನಂತರ ಅವರು ಎರಡನೆಯ ವರ್ಷದಲ್ಲಿ ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದು ಹೋಗಿದೆ; ನಮ್ಮ ಕುರಿದನಗಳು ಸ್ವಾಮಿಯ ವಶವಾದವು; ಹೀಗಿರುವುದರಿಂದ ನಮ್ಮ ಭೂಮಿಯೂ, ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾಮಿಗೆ ಮರೆಮಾಡದೆ ತಿಳಿಸುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ವರ್ಷ ಕಳೆದು ಮಾರನೆಯ ವರ್ಷದಲ್ಲಿ ಅವರು ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲ ವೆಚ್ಚವಾಯಿತು. ನಮ್ಮ ಪಶುಪ್ರಾಣಿಗಳು ದಣಿಯ ವಶವಾದುವು; ಇನ್ನು ಉಳಿದಿರುವುದು ನಮ್ಮ ಭೂಮಿ ಮತ್ತು ದೇಹಗಳೇ ಹೊರತು ಬೇರೇನೂ ಇಲ್ಲ; ದಣಿಗೆ ಮುಚ್ಚುಮರೆಯಿಲ್ಲದೆ ತಿಳಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ವರುಷ ಕಳೆದನಂತರ ಅವರು ಎರಡನೆಯ ವರುಷದಲ್ಲಿ ಅವನ ಬಳಿಗೆ ಬಂದು - ನಮ್ಮ ಹಣವೆಲ್ಲಾ ವೆಚ್ಚವಾಗಿ ಹೋಗಿದೆ; ನಮ್ಮ ಕುರಿದನಗಳು ಸ್ವಾವಿುಯ ವಶವಾದವು; ಹೀಗಿರುವದರಿಂದ ನಮ್ಮ ಭೂವಿುಯೂ ನಮ್ಮ ದೇಹಗಳೂ ಹೊರತು ಬೇರೆ ಇನ್ನೇನೂ ಉಳಿದಿಲ್ಲವೆಂದು ನಮ್ಮ ಸ್ವಾವಿುಗೆ ಮರೆಮಾಜದೆ ತಿಳಿಸಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ವರ್ಷವಾದ ಮೇಲೆ ಮಾರನೆಯ ವರ್ಷದಲ್ಲಿ, ಅವರು ಅವನ ಬಳಿಗೆ ಬಂದು ಅವನಿಗೆ, “ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವುದರಿಂದ, ನಮ್ಮ ಶರೀರಗಳೂ, ನಮ್ಮ ಭೂಮಿಯೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬುದನ್ನು ನಮ್ಮ ಒಡೆಯನಿಗೆ ಮರೆಮಾಡದೆ ತಿಳಿಸುತ್ತಿದ್ದೇವೆ. ಅಧ್ಯಾಯವನ್ನು ನೋಡಿ |