Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:2 - ಪರಿಶುದ್ದ ಬೈಬಲ್‌

2 ಯೋಸೇಫನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಆರಿಸಿಕೊಂಡು ಫರೋಹನ ಬಳಿಗೆ ಅವರನ್ನು ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದು ಮಾತ್ರವಲ್ಲ, ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:2
5 ತಿಳಿವುಗಳ ಹೋಲಿಕೆ  

ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.


ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಉದ್ಯೋಗವೇನು?’ ಎಂದು ಕೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು