Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:22 - ಪರಿಶುದ್ದ ಬೈಬಲ್‌

22 ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅರ್ಚಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಅವರಿಗೆ ಫರೋಹನಿಂದ ಭತ್ಯ ದೊರಕುತ್ತಿತ್ತು. ಆ ಭತ್ಯದಿಂದ ಜೀವನ ನಡೆಸುತ್ತಿದ್ದ ಆ ಅರ್ಚಕರು ತಮ್ಮ ಭೂಮಿಯನ್ನು ಮಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ವೈದಿಕರ ಭೂವಿುಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ವೈದಿಕರಿಗೆ ಫರೋಹನ ಕಡೆಯಿಂದ ಆಯವು ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಆಯದಿಂದ ಜೀವನ ಮಾಡುತ್ತಿದ್ದರು; ಆದದರಿಂದ ತಮ್ಮ ಭೂವಿುಯನ್ನು ಮಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯಾಜಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಫರೋಹನು ಯಾಜಕರಿಗೆ ಭತ್ಯೆಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು, ಅವರು ಊಟಮಾಡುತ್ತಿದ್ದರು. ಆದ್ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:22
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.


ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.


ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು.


ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.


ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.


ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಆದರೆ ಯಾವಾಗಲೂ ಈ ಊಟವನ್ನು ಲೇವಿಯರೊಂದಿಗೆ ಹಂಚಿಕೊಂಡು ತಿನ್ನಬೇಕೆಂಬುದನ್ನು ಜ್ಞಾಪಕದಲ್ಲಿಡಿರಿ. ನೀವು ನಿಮ್ಮ ದೇಶದಲ್ಲಿ ವಾಸಿಸುವಷ್ಟು ಕಾಲ ಹೀಗೆ ಮಾಡಿರಿ.


ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು.


ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.


ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,


ಈಜಿಪ್ಟಿನ ಎಲ್ಲಾ ಜನರು ಫರೋಹನ ಗುಲಾಮರಾಗಿದ್ದರು.


ಯೋಸೇಫನು ಜನರಿಗೆ, “ಈಗ ನಾನು ನಿಮ್ಮನ್ನೂ ನಿಮ್ಮ ಜಮೀನನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಆದ್ದರಿಂದ ನಾನು ನಿಮಗೆ ಬೀಜವನ್ನು ಕೊಡುತ್ತೇನೆ. ನೀವು ನಿಮ್ಮ ಜಮೀನುಗಳಲ್ಲಿ ಬಿತ್ತನೆಮಾಡಿರಿ.


ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು