Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:26 - ಪರಿಶುದ್ದ ಬೈಬಲ್‌

26 ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬದನ್ನು ಯೋಸೇಫನು ಐಗುಪ್ತದೇಶದಲ್ಲಿ ಕಟ್ಟಳೆಯಾಗಿ ನೇವಿುಸಿದನು. ಈ ದಿನದವರೆಗೂ ಹಾಗೆಯೇ ಇದೆ. ವೈದಿಕರ ಭೂವಿುಯು ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:26
11 ತಿಳಿವುಗಳ ಹೋಲಿಕೆ  

ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.


ಇಸ್ರೇಲ್ ಜನರ ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಅತೀ ದುಷ್ಟ ಜನಾಂಗಗಳನ್ನು ಬರಮಾಡುವೆನು. ನಾನು ಗರ್ವಿಷ್ಠರ ಸೊಕ್ಕನ್ನು ಮುರಿಯುವೆನು; ಅವರ ಆರಾಧನೆಯ ಸ್ಥಳಗಳು ಅಪರಿಶುದ್ಧಗೊಳ್ಳುವವು.


ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.


ನಿನ್ನ ಶತ್ರುಗಳನ್ನು ಸೋಲಿಸಲು ನಿನಗೆ ಸಹಾಯ ಮಾಡಿದ ಮಹೋನ್ನತನಾದ ದೇವರಿಗೆ ಕೊಂಡಾಟವಾಗಲಿ.” ಅಬ್ರಾಮನು ಯುದ್ಧದಿಂದ ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕೀಚೆದೆಕನಿಗೆ ಕೊಟ್ಟನು.


ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು.


“ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.


“ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.


“ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ.


“ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.


ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು