ಆದಿಕಾಂಡ 47:27 - ಪರಿಶುದ್ದ ಬೈಬಲ್27 ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇಸ್ರಾಯೇಲ್ಯರು ಐಗುಪ್ತದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು. ಅಧ್ಯಾಯವನ್ನು ನೋಡಿ |