Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:29 - ಪರಿಶುದ್ದ ಬೈಬಲ್‌

29 ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲನಿಗೆ ಅವಸಾನಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರಸಿ - ನಿನಗೆ ನನ್ನ ಮೇಲೆ ಪ್ರೀತಿಯಿದ್ದರೆ ನೀನು ನಂಬಿಕೆಯಿಂದಲೂ ಪ್ರೀತಿಯಿಂದಲೂ ನನ್ನ ಮಾತನ್ನು ನಡಿಸಬೇಕು; ಏನಂದರೆ, ನನಗೆ ಐಗುಪ್ತ ದೇಶದಲ್ಲಿ ಸಮಾಧಿಮಾಡಬೇಡವೆಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:29
28 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು.


ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.


ದಾವೀದನು ಸಾಯುವ ಕಾಲವು ಹತ್ತಿರವಾಯಿತು. ಆದ್ದರಿಂದ ದಾವೀದನು ಸೊಲೊಮೋನನೊಂದಿಗೆ ಮಾತನಾಡುತ್ತಾ, ಅವನಿಗೆ,


ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ಮರಣ ಹೊಂದದೆ ಚಿರಂಜೀವಿಯಾಗಿರುವವನು ಯಾರೂ ಇಲ್ಲ. ಯಾವ ವ್ಯಕ್ತಿಯೂ ಸಮಾಧಿಯಿಂದ ತಪ್ಪಿಸಿಕೊಳ್ಳಲಾರನು.


ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.


ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು.


ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು.


ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.


ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ.


“ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ.


ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ಇಸಾಕನು ಅವನಿಗೆ, “ನನಗೆ ವಯಸ್ಸಾಯಿತು. ನಾನು ಬಹುಬೇಗನೆ ಸಾಯಬಹುದು.


‘ನನ್ನ ತಂದೆಯು ಸಾಯುವಾಗ ನಾನು ಅವನಿಗೆ ಒಂದು ಪ್ರಮಾಣವನ್ನು ಮಾಡಿದೆನು. ಕಾನಾನ್ ದೇಶದಲ್ಲಿ ಒಂದು ಗುಹೆಯನ್ನು ಅವನು ತನಗಾಗಿ ಸಿದ್ಧಪಡಿಸಿಕೊಂಡಿದ್ದಾನೆ. ಆದ್ದರಿಂದ, ನಾನು ಹೋಗಿ ನನ್ನ ತಂದೆಯನ್ನು ಸಮಾಧಿಮಾಡಿ ಮತ್ತೆ ಹಿಂತಿರುಗಿ ನಿಮ್ಮ ಬಳಿಗೆ ಬರಲು ದಯವಿಟ್ಟು ಅವಕಾಶ ಕೊಡಿ’ ಎಂದು ತಿಳಿಸಿರಿ” ಎಂಬುದಾಗಿ ಹೇಳಿದನು.


ಯೆಹೋವನಾಣೆ, ಸೌಲನನ್ನು ಸ್ವತಃ ಯೆಹೋವನೇ ದಂಡಿಸುತ್ತಾನೆ. ಸೌಲನು ಸ್ವಾಭಾವಿಕನಾದ ಮರಣಹೊಂದಬಹುದು ಅಥವಾ ಯುದ್ಧದಲ್ಲಿ ಕೊಲ್ಲಲ್ಪಡಬಹುದು.


ದಾವೀದನ ಭಟರು ಅಸಾಹೇಲನ ಶವವನ್ನು ಬೆತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.


ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.


ಹೀಗೆ ಯಾಕೋಬನ ಗಂಡುಮಕ್ಕಳು ತಮ್ಮ ತಂದೆಯ ಆಜ್ಞೆಯಂತೆ ಮಾಡಿದರು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.


ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.


“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನವನ್ನು ನೆರವೇರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು