ಆದಿಕಾಂಡ 47:31 - ಪರಿಶುದ್ದ ಬೈಬಲ್31 ಇಸ್ರೇಲನು, “ನನಗೆ ಪ್ರಮಾಣ ಮಾಡು” ಎಂದು ಹೇಳಿದ್ದರಿಂದ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಮೇಲೆ ಇಸ್ರೇಲನು ಹಾಸಿಗೆಯ ಮೇಲೆ ಮತ್ತೆ ತನ್ನ ತಲೆಬಾಗಿ ದೇವರಿಗೆ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇಸ್ರಾಯೇಲನು, “ಪ್ರಮಾಣಮಾಡು” ಎನ್ನಲು ಅವನು ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಬಾಗಿ ದೇವರಿಗೆ ನಮಸ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇಸ್ರಾಯೇಲನು - ಪ್ರಮಾಣ ಮಾಡು ಅನ್ನಲು ಅವನು ಪ್ರಮಾಣಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿ ದೇವರಿಗೆ ನಮಸ್ಕಾರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯಾಕೋಬನು ತನಗೆ ಪ್ರಮಾಣಮಾಡು ಎಂದಾಗ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. ಅಧ್ಯಾಯವನ್ನು ನೋಡಿ |
ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.