4 ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.
4 ಅದಲ್ಲದೆ ಅವರು ಫರೋಹನಿಗೆ, “ಕಾನಾನ್ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.
4 ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.
4 ಅದಲ್ಲದೆ ಅವರು ಅವನಿಗೆ - ಕಾನಾನ್‍ದೇಶದಲ್ಲಿ ಬರವು ಘೋರವಾದ್ದರಿಂದ ನಿನ್ನ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ; ಆದದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್‍ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು ಎಂದು ಹೇಳಿಕೊಂಡರು.
4 ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.
ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.
ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.
“ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಮೊದಲು ಈಜಿಪ್ಟಿನಲ್ಲಿ ನೆಲೆಸಲು ಹೋಗಿ, ನಂತರ ಅಲ್ಲಿ ಅವರು ದಾಸರಾದರು. ಆ ಬಳಿಕ ಅಶ್ಶೂರವು ಅವರನ್ನು ಗುಲಾಮರನ್ನಾಗಿ ಮಾಡಿತು.