ಆದಿಕಾಂಡ 47:6 - ಪರಿಶುದ್ದ ಬೈಬಲ್6 ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದರೊಳಗಣ ಉತ್ತಮಭಾಗದಲ್ಲಿ ನಿನ್ನ ತಂದೆಗೂ ನಿನ್ನ ಅಣ್ಣತಮ್ಮಂದಿರಿಗೂ ವಾಸಸ್ಥಾನವನ್ನು ನೇವಿುಸಬಹುದು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಯೋಗ್ಯರಾಗಿ ತೋರಿದರೆ ಅವರನ್ನು ನನ್ನ ದನಗಳ ಮೇಲ್ವಿಚಾರಣೆಗೆ ನೇವಿುಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು. ಅಧ್ಯಾಯವನ್ನು ನೋಡಿ |
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.