ಆದಿಕಾಂಡ 47:7 - ಪರಿಶುದ್ದ ಬೈಬಲ್7 ಆಗ ಯೋಸೇಫನು ತನ್ನ ತಂದೆಯನ್ನು ಫರೋಹನ ಸನ್ನಿಧಿಗೆ ಕರೆಯಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |
ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.
ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.