ಆದಿಕಾಂಡ 47:9 - ಪರಿಶುದ್ದ ಬೈಬಲ್9 ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |