ಆದಿಕಾಂಡ 48:1 - ಪರಿಶುದ್ದ ಬೈಬಲ್1 ಸ್ವಲ್ಪ ಕಾಲದ ನಂತರ, ತಂದೆಯು ಬಹಳ ಅನಾರೋಗ್ಯದಿಂದಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆಯನ್ನು ಮತ್ತು ಎಫ್ರಾಯೀಮನನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕೆಲವು ಕಾಲವಾದ ಮೇಲೆ, “ತಂದೆ ಬಹಳ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ,” ಎಂಬ ಸುದ್ದಿ ಜೋಸೆಫನಿಗೆ ಬಂದಿತು. ಅವನು ಮನಸ್ಸೆ ಮತ್ತು ಎಫ್ರಯಿಮ್ ಎಂಬ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕೆಲವು ಕಾಲವಾದ ಮೇಲೆ ತಂದೆಯು ಬಹಳ ಬಲಹೀನನಾಗಿ ಬಿದ್ದಿದ್ದಾನೆಂಬ ವರ್ತಮಾನವು ಯೋಸೇಫನಿಗೆ ಬರಲು ಅವನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ಸಂಗಡ ಕರೆದುಕೊಂಡು ಅವನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು. ಅಧ್ಯಾಯವನ್ನು ನೋಡಿ |
ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.