ಆದಿಕಾಂಡ 48:14 - ಪರಿಶುದ್ದ ಬೈಬಲ್14 ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮನಸ್ಸೆಯು ಜೇಷ್ಠಮಗನಾಗಿದ್ದರೂ ಯಕೋಬನು ತನ್ನ ಕೈಗಳನ್ನು ಅಡ್ಡಡ್ಡವಾಗಿ ಚಾಚಿ ಕಿರಿಯವನಾದ ಎಫ್ರಯಿಮನ ತಲೆಯ ಮೇಲೆ ಬಲಗೈಯನ್ನು, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನು ಇಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮನಸ್ಸೆಯು ಚೊಚ್ಚಲುಮಗನಾಗಿದ್ದರೂ ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟು ಯೋಸೇಫನನ್ನು ಆಶೀರ್ವದಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. ಅಧ್ಯಾಯವನ್ನು ನೋಡಿ |