ಆದಿಕಾಂಡ 48:15 - ಪರಿಶುದ್ದ ಬೈಬಲ್15 ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”
ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.