Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:19 - ಪರಿಶುದ್ದ ಬೈಬಲ್‌

19 ಅದಕ್ಕೆ ಅವನ ತಂದೆಯು, “ನನಗೆ ಗೊತ್ತು ಮಗನೇ, ನನಗೆ ಗೊತ್ತು. ಮನಸ್ಸೆ ಮೊದಲು ಹುಟ್ಟಿದವನು. ಅವನು ಮಹಾವ್ಯಕ್ತಿಯಾಗುವನು. ಅವನು ಅನೇಕ ಜನರಿಗೆ ತಂದೆಯಾಗುವನು. ಆದರೆ ತಮ್ಮನು ಅಣ್ಣನಿಗಿಂತ ಮಹಾವ್ಯಕ್ತಿಯಾಗುವನು. ಅವನ ಕುಟುಂಬವು ತುಂಬ ದೊಡ್ಡದಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದರೆ ಅವನ ತಂದೆ ಒಪ್ಪದೆ - ಮಗನೇ, ನಾನು ಬಲ್ಲೆ, ಬಲ್ಲೆ; ಇವನಿಂದಲೂ ಜನಾಂಗವುಂಟಾಗುವದು; ಇವನೂ ಬಲಿಷ್ಠನಾಗುವನು; ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು; ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:19
17 ತಿಳಿವುಗಳ ಹೋಲಿಕೆ  

ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”


ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.


ಜೆಬುಲೋನನ ಕುಲದಿಂದ 12,000 ಯೋಸೇಫನ ಕುಲದಿಂದ 12,000 ಬೆನ್ಯಾಮೀನನ ಕುಲದಿಂದ 12,000


ಆಶೇರನ ಕುಲದಿಂದ 12,000 ನಫ್ತಾಲಿಯ ಕುಲದಿಂದ 12,000 ಮನಸ್ಸೆಯ ಕುಲದಿಂದ 12,000


“‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನ್ನು ತೂಗು ಹಾಕಿದರು. ನಿನ್ನ ನಗರಕ್ಕೆ ಘನತೆಯನ್ನು ಅವರು ತಂದರು.


“ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.


ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ.


ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.


“ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ:


ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು.


ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು