ಆದಿಕಾಂಡ 48:20 - ಪರಿಶುದ್ದ ಬೈಬಲ್20 ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. ‘ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ’ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ದಿನ ಅವರನ್ನು ಆಶೀರ್ವದಿಸುತ್ತಾ ಹೀಗೆಂದನು: "ಎಫ್ರಯಿಮ್ - ಮನಸ್ಸೆಯಂತೆ ನಿಮ್ಮನ್ನೂ ಅಭಿವೃದ್ಧಿಗೊಳಿಸಲಿ ದೇವರು! ಹೀಗೆ ನಿಮ್ಮ ಹೆಸರನ್ನು ಉಚ್ಚರಿಸುತ್ತಾ ಇತರರನ್ನು ಆಶೀರ್ವದಿಸುವರು ಇಸ್ರಯೇಲರು". ಈ ರೀತಿಯಾಗಿ ಅವನು ಎಫ್ರಯಿಮನನ್ನು ಮನಸ್ಸೆಗಿಂತ ಮುಂದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆ ಕಾಲದಲ್ಲಿ ಅವನು ಅವರನ್ನು ಆಶೀರ್ವದಿಸಿ - ಇಸ್ರಾಯೇಲ್ಯರು ಯಾರನ್ನಾದರೂ ಆಶೀರ್ವದಿಸುವಾಗ - ಎಫ್ರಾಯೀಮನಿಗೂ ಮನಸ್ಸೆಗೂ ಉಂಟಾದ ಸಂತತಿಯಂತೆ ದೇವರು ನಿನಗೂ ಸಂತಾನವನ್ನು ಅನುಗ್ರಹಿಸಲಿ ಎಂದು ನಿಮ್ಮನ್ನು ದೃಷ್ಟಾಂತಮಾಡಿ ಹೇಳುವರು ಅಂದನು. ಹೀಗೆ ಹೇಳಿದ್ದರಿಂದ ಎಫ್ರಾಯೀಮನನ್ನು ಮನಸ್ಸೆಗೆ ಮುಂದಾಗಿ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು: ‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’ ” ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |