6 ಆದ್ದರಿಂದ ಈ ಇಬ್ಬರು ಗಂಡುಮಕ್ಕಳು ನನಗೆ ಮಕ್ಕಳಂತೆಯೇ ಇರುತ್ತಾರೆ. ನಾನು ಹೊಂದಿರುವ ಪ್ರತಿಯೊಂದರಲ್ಲಿಯೂ ಅವರು ಪಾಲನ್ನು ಹೊಂದುವರು. ಆದರೆ ನಿನಗೆ ಬೇರೆ ಗಂಡುಮಕ್ಕಳಿದ್ದರೆ ಅವರು ಎಫ್ರಾಯೀಮ್ ಮತ್ತು ಮನಸ್ಸೆಯವರಿಗೆ ಮಕ್ಕಳಾಗಿರುತ್ತಾರೆ. ಅಂದರೆ ಎಫ್ರಾಯೀಮ್ ಮತ್ತು ಮನಸ್ಸೆ ಹೊಂದಿರುವ ಪ್ರತಿಯೊಂದರಲ್ಲಿ ಅವರು ಪಾಲನ್ನು ಹೊಂದುವರು.
ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.
ಈಗ ನಿನಗೆ ಇಬ್ಬರು ಗಂಡುಮಕ್ಕಳಿದ್ದಾರೆ. ನಾನು ಈಜಿಪ್ಟಿಗೆ ಬರುವುದಕ್ಕಿಂತ ಮೊದಲೇ ಅವರು ಇಲ್ಲಿ ಹುಟ್ಟಿದರು. ನಿನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ನನ್ನ ಮಕ್ಕಳಂತೆಯೇ ಇದ್ದಾರೆ. ಅವರು ನನಗೆ ರೂಬೇನ್ ಮತ್ತು ಸಿಮೆಯೋನರಂತೆಯೇ ಇದ್ದಾರೆ.
ಪದ್ದನ್‌ಅರಾಮಿನಿಂದ ಹಿಂತಿರುಗಿ ಬರುತ್ತಿರುವಾಗ ರಾಹೇಲಳು ಸತ್ತಳು. ಇದು ನನಗೆ ತುಂಬ ದುಃಖವನ್ನು ಉಂಟುಮಾಡಿತು. ನಾವು ಕಾನಾನ್ ದೇಶದಲ್ಲಿ ಎಫ್ರಾತ್ ನಗರದ ಕಡೆಗೆ ಪ್ರಯಾಣ ಮಾಡುತ್ತಿದ್ದೆವು. ಆದ್ದರಿಂದ ನಾನು ಅವಳನ್ನು ಬೆತ್ಲೆಹೇಮೆಂಬ ಎಫ್ರಾತ್ ನಗರದ ರಸ್ತೆಯಲ್ಲಿ ಸಮಾಧಿ ಮಾಡಿದೆನು” ಎಂದು ಹೇಳಿದನು.