Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:14 - ಪರಿಶುದ್ದ ಬೈಬಲ್‌

14 “ಇಸ್ಸಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ. ಅವನು ಭಾರವಾದ ಹೊರೆಯನ್ನು ಹೊರುವುದರಿಂದ ಮಲಗಿ ವಿಶ್ರಮಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಸ್ಸಾಕಾರನು ಕುರೀಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:14
10 ತಿಳಿವುಗಳ ಹೋಲಿಕೆ  

ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.


ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.


ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ಸಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು.


ಅಬೀಮೆಲೆಕನು ಸತ್ತ ತರುವಾಯ ಇಸ್ರೇಲರನ್ನು ರಕ್ಷಿಸಲು ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ತೋಲ. ತೋಲನು ಪೂವನ ಮಗನು. ಪೂವನು ದೋದೋ ಎಂಬವನ ಮಗನು. ತೋಲನು ಇಸ್ಸಾಕಾರ್ ಕುಲಕ್ಕೆ ಸೇರಿದವನೂ ಶಾಮೀರ ನಗರದ ವಾಸಿಯೂ ಆಗಿದ್ದನು. ಶಾಮೀರ ನಗರವು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.


ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”


ಆಗ ಅವರು ಮೋಶೆಯ ಬಳಿಗೆ ಬಂದು, “ನಮ್ಮ ಪಶುಗಳಿಗಾಗಿ ನಾವು ಬೇಲಿಯನ್ನು ಹಾಕೋಣ ಮತ್ತು ಸ್ತ್ರೀಯರಿಗಾಗಿ ಮತ್ತು ಮಕ್ಕಳಿಗಾಗಿ ಊರುಗಳನ್ನು ಕಟ್ಟುವೆವು.


ಕುರಿಹಟ್ಟಿಯೊಳಗೆ ಇದ್ದವರೂ ಐಶ್ವರ್ಯವನ್ನು ಪಾಲುಮಾಡಿಕೊಳ್ಳುವರು. ಬಂಗಾರದ ಗರಿಗಳಿಂದ ಥಳಥಳಿಸುವ ಬೆಳ್ಳಿ ಹೊದಿಸಿರುವ ಪಾರಿವಾಳದ ರೆಕ್ಕೆಗಳನ್ನು ಅವರು ಪಡೆದುಕೊಳ್ಳುವರು.”


ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು