ಆದಿಕಾಂಡ 49:15 - ಪರಿಶುದ್ದ ಬೈಬಲ್15 ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವದನ್ನು ನೋಡಿ ಅವನು ಹೊರೆಯನ್ನು ಹೊರುವದಕ್ಕೆ ಬೆನ್ನು ಬೊಗ್ಗಿಸಿಕೊಂಡು ಬಿಟ್ಟೀ ಕೆಲಸವನ್ನು ಮಾಡುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ವಿಶ್ರಾಂತಿಯು ಒಳ್ಳೆಯದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆ ಹೊರುವುದಕ್ಕೆ ತನ್ನ ಹೆಗಲನ್ನು ಬಗ್ಗಿಸಿ ಬಿಟ್ಟಿಯ ಕೆಲಸ ಮಾಡುವನು. ಅಧ್ಯಾಯವನ್ನು ನೋಡಿ |
“ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”