Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:16 - ಪರಿಶುದ್ದ ಬೈಬಲ್‌

16 “ಇತರ ಇಸ್ರೇಲರ ಕುಟುಂಬಗಳಿಗೆ ತೀರ್ಪುಮಾಡುವಂತೆ, ದಾನನು ತನ್ನ ಸ್ವಂತ ಜನರಿಗೆ ತೀರ್ಪು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಾನನು ತನ್ನ ಜನರನ್ನಾಳುವನು ಇಸ್ರಯೇಲಿನಿತರ ಕುಲಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾನನು ಇಸ್ರಾಯೇಲ್ಯರ ಕುಲಗಳಿಗೆ ಯೋಗ್ಯವಾಗುವ ರೀತಿಯಲ್ಲಿ ತನ್ನ ಜನರ ವ್ಯಾಜ್ಯವನ್ನು ಜಯಕ್ಕೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ದಾನನು ಇಸ್ರಾಯೇಲನ ಗೋತ್ರಗಳಲ್ಲಿ ಒಂದು ಗೋತ್ರವಾಗಿ ತನ್ನ ಜನರಿಗೆ ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:16
10 ತಿಳಿವುಗಳ ಹೋಲಿಕೆ  

ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.”


ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು.


ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಅದು ಫಿಲಿಷ್ಟಿಯರ ಕಾಲವಾಗಿತ್ತು.


ಚೊರ್ಗಾ ನಗರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಮಾನೋಹ, ಅವನು ದಾನ್ ಕುಲದವನಾಗಿದ್ದನು. ಮಾನೋಹನಿಗೆ ಒಬ್ಬ ಹೆಂಡತಿಯಿದ್ದಳು. ಆದರೆ ಅವಳು ಬಂಜೆಯಾಗಿದ್ದಳು.


ಆಮೇಲೆ ಎಲ್ಲಾ ಕುಲಗಳ ಹಿಂಭಾಗದಲ್ಲಿ ದಾನ್ ಕುಲದಿಂದ ಮುನ್ನಡೆಸಲ್ಪಟ್ಟ ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಷದ್ದೈನ ಮಗನಾದ ಅಹೀಗೆಜೆರನು ದಾನ್ ಕುಲದ ಸೇನಾಧಿಪತಿ.


ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”


ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.” ದಾರಿಯ ಸಮೀಪದಲ್ಲಿ ಮಲಗಿದ್ದು ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಬೀಳಿಸುವ ವಿಷಸರ್ಪದಂತಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು