Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:19 - ಪರಿಶುದ್ದ ಬೈಬಲ್‌

19 “ಒಂದು ಕಳ್ಳರ ಗುಂಪು ಗಾದನ ಮೇಲೆ ಆಕ್ರಮಣ ಮಾಡುವುದು. ಆದರೆ ಗಾದನು ಅವರನ್ನು ಓಡಿಸಿ ಬಿಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗಾದನು ಗುರಿಯಾಗುವನು ಸುಲಿಗೆಗಾರರಾಕ್ರಮಣಕೆ ಓಡುವನಾ ದರೋಡೆಗಾರರನ್ನು ಹಿಮ್ಮೆಟ್ಟಿಕೊಂಡೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಗಾದನ ಸಂಗತಿ - ಸುಲಿಗೆಮಾಡುವವರು ದಂಡೆತ್ತಿ ಅವನ ಮೇಲೆ ಬೀಳಲು ಇವನು ಅವರನ್ನು ಹಿಮ್ಮೆಟ್ಟಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಗಾದನ ಮೇಲೆ ಸೈನ್ಯವು ದಾಳಿಮಾಡುವುದು, ಕೊನೆಗೆ ಅವನೇ ಅವರನ್ನು ಓಡಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:19
11 ತಿಳಿವುಗಳ ಹೋಲಿಕೆ  

ಲೇಯಳು, “ನಾನು ಅದೃಷ್ಟವಂತೆ” ಎಂದು ಹೇಳಿ, ಆ ಮಗುವಿಗೆ ಗಾದ್ ಎಂದು ಹೆಸರಿಟ್ಟಳು.


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು.


ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ.


“ಆಶೇರನ ನಾಡು ಒಳ್ಳೆಯ ಆಹಾರವನ್ನು ಯಥೇಚ್ಛವಾಗಿ ಫಲಿಸುತ್ತದೆ; ರಾಜನಿಗೆ ಸಾಕಾಗುವಷ್ಟು ಒಳ್ಳೆಯ ಆಹಾರವು ಅವನಲ್ಲಿರುವುದು.”


ಗಾದ್ ಕುಲದ ಸೈನ್ಯಾಧಿಕಾರಿ ಏಜೆರ; ಎರಡನೆಯ ಅಧಿಕಾರಿ ಓಬದ್ಯ; ಎಲೀಯಾಬನು ಮೂರನೆಯ ಅಧಿಕಾರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು