ಆದಿಕಾಂಡ 49:22 - ಪರಿಶುದ್ದ ಬೈಬಲ್22 “ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೋಸೇಫನು ಬಹುಫಲವನ್ನು ಬಿಡುವ ವೃಕ್ಷಕ್ಕೆ ಸಮಾನನಾಗಿದ್ದಾನೆ, ಒರತೆಯ ಬಳಿಯಲ್ಲಿ ಬೆಳೆದು ರೆಂಬೆಗಳನ್ನು ಗೋಡೆಯ ಆಚೆಗೆ ಚಾಚಿರುವ ಫಲವೃಕ್ಷದಂತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”