Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:27 - ಪರಿಶುದ್ದ ಬೈಬಲ್‌

27 “ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. ಅವನು ಸಾಯಂಕಾಲ ಮಿಕ್ಕುಳಿದುದ್ದನ್ನು ಹಂಚಿಕೊಳ್ಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ಹಿಡಿದುಕೊಂಡದ್ದನ್ನು ಬೆಳಿಗ್ಗೆ ಉಣ್ಣುವನು. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಬೆನ್ಯಾಮೀನನು ಕ್ರೂರವಾದ ತೋಳದಂತಿದ್ದಾನೆ. ಬೆಳಿಗ್ಗೆ ತಿನ್ನುತ್ತಾನೆ, ಸಂಜೆ ಕೊಳ್ಳೆಯನ್ನು ಹಂಚಿಕೊಳ್ಳುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:27
25 ತಿಳಿವುಗಳ ಹೋಲಿಕೆ  

“ಜೆರುಸಲೇಮಿನ ನಾಯಕರು ತಾನು ಹಿಡಿದ ಪ್ರಾಣಿಯನ್ನು ತಿನ್ನುವ ತೋಳಕ್ಕೆ ಸಮಾನರಾಗಿದ್ದಾರೆ. ಅವರು ಧನಿಕರಾಗುವದಕ್ಕಾಗಿ ಜನರನ್ನು ಹಿಡಿದು ಕೊಲ್ಲುವರು.


ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.


ಆಗ ಬೆನ್ಯಾಮೀನ್ಯರ ಸೈನ್ಯವು ಗಿಬೆಯ ನಗರದಿಂದ ಹೊರಗೆ ಬಂದಿತು. ಆ ದಿನದ ಯುದ್ಧದಲ್ಲಿ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲ್ ಸೈನ್ಯದ ಇಪ್ಪತ್ತೆರಡು ಸಾವಿರ ಜನರನ್ನು ಕೊಂದುಹಾಕಿತು.


ಬೆನ್ಯಾಮೀನನ ಗಂಡುಮಕ್ಕಳು: ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಎಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್.


ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.


ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;


ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.


ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.


ಜೆರುಸಲೇಮಿನ ನಾಯಕರು ಗರ್ಜಿಸುವ ಸಿಂಹದಂತೆ ಇದ್ದಾರೆ, ಅವರ ನ್ಯಾಯಾಧಿಪತಿಗಳು ರಾತ್ರಿ ಕಾಲದಲ್ಲಿ ಕುರಿಗಳ ಮೇಲೆ ಬೀಳುವ ಹಸಿದ ತೋಳಗಳಂತಿದ್ದಾರೆ. ಬೆಳಗಾಗಲು, ಏನೂ ಉಳಿಯುವುದಿಲ್ಲ.


ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.


ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.


ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”


ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”


ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”


ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು.


ಬೆನ್ಯಾಮೀನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗನಾದ ಎಲೀದಾದ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು