Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:29 - ಪರಿಶುದ್ದ ಬೈಬಲ್‌

29 ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:29
16 ತಿಳಿವುಗಳ ಹೋಲಿಕೆ  

ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.


ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.


“ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.


ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.


ಆದರೆ ದಯವಿಟ್ಟು ನನ್ನನ್ನು ಹಿಂದಿರುಗಲು ಬಿಡು. ನಂತರ ನಾನು ನನ್ನ ಸ್ವಂತ ಸ್ಥಳದಲ್ಲಿ ಸಾಯುತ್ತೇನೆ. ನನ್ನ ತಂದೆತಾಯಿಗಳನ್ನು ಸಮಾಧಿ ಮಾಡಿದ ಸ್ಮಶಾನದಲ್ಲಿಯೇ ನನ್ನನ್ನು ಸಮಾಧಿ ಮಾಡಲಿ. ಆದರೆ ನನ್ನ ಒಡೆಯನಾದ ರಾಜನೇ, ಇಲ್ಲಿರುವ ಕಿಮ್ಹಾಮನು ನಿನ್ನ ಸೇವಕನಾಗಿರುತ್ತಾನೆ; ಅವನು ನಿನ್ನೊಂದಿಗೆ ಬರುತ್ತಾನೆ. ನಿನಗೆ ಇಷ್ಟಬಂದಂತೆ ಅವನಿಗೆ ಮಾಡು” ಎಂದು ಹೇಳಿದನು.


ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.


ಈ ಜಮೀನು ಮಮ್ರೆಗೆ ಪೂರ್ವದಲ್ಲಿರುವ ಮಕ್ಪೇಲದಲ್ಲಿತ್ತು. ಅಬ್ರಹಾಮನು ಆ ಜಮೀನಿಗೂ ಅದರಲ್ಲಿದ್ದ ಗವಿಗೂ ಜಮೀನಿನಲ್ಲಿದ್ದ ಎಲ್ಲಾ ಮರಗಳಿಗೂ ಒಡೆಯನಾದನು. ಎಫ್ರೋನನಿಗೂ ಅಬ್ರಹಾಮನಿಗೂ ಆದ ಒಪ್ಪಂದಕ್ಕೆ ನಗರದವರೆಲ್ಲರು ಸಾಕ್ಷಿಗಳಾದರು.


ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು.


ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು.


ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.


ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.


ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೆಬ್ರೋನೆಂಬ ಕಿರ್ಯತರ್ಬದಲ್ಲಿದ್ದ ಮಮ್ರೆಗೆ ಬಂದನು. ಅಬ್ರಹಾಮನು ಮತ್ತು ಇಸಾಕನು ವಾಸವಾಗಿದ್ದದ್ದು ಇಲ್ಲೇ.


ಹೀಗೆ ಯಾಕೋಬನ ಗಂಡುಮಕ್ಕಳು ತಮ್ಮ ತಂದೆಯ ಆಜ್ಞೆಯಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು