ಆದಿಕಾಂಡ 49:9 - ಪರಿಶುದ್ದ ಬೈಬಲ್9 ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೂದನು ಪ್ರಾಯದ ಸಿಂಹದಂತಿದ್ದಾನೆ; ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲಿದ್ದೀ. ಅವನು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದ್ದಾನೆ; ಮೃಗೇಂದ್ರನಿಗೆ ಸಮಾನನಾದ ಇವನನ್ನು ಕೆಣಕುವದು ಯಾರಿಂದಾದೀತು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು? ಅಧ್ಯಾಯವನ್ನು ನೋಡಿ |