Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:2 - ಪರಿಶುದ್ದ ಬೈಬಲ್‌

2 ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಇದಲ್ಲದೆ ಅದೇ ದಿವಸದಲ್ಲಿ ಅವರನ್ನು ಆಶೀರ್ವದಿಸಿ ಅವರಿಗೆ ಮನುಷ್ಯ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅದೇ ದಿನದಲ್ಲಿ ಅವರನ್ನು ಆಶೀರ್ವದಿಸಿ, ಅವರಿಗೆ “ಮನುಷ್ಯ” ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:2
9 ತಿಳಿವುಗಳ ಹೋಲಿಕೆ  

ಆದರೆ ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ನಿರ್ಮಿಸಿದನು.’


ಯೇಸು, “ನೀವು ನಿಜವಾಗಿಯೂ ಇದನ್ನು ಪವಿತ್ರಗ್ರಂಥದಲ್ಲಿ ಓದಿದ್ದೀರಿ. ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಸೃಷ್ಟಿಸಿದನು.’


ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.


ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.


ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.


ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.


ದೇವರಾದ ಯೆಹೋವನು ಆ ಮನುಷ್ಯನನ್ನು ಏದೆನ್ ತೋಟಕ್ಕೆ ಕರೆದೊಯ್ದು ವ್ಯವಸಾಯ ಮಾಡುವುದಕ್ಕಾಗಿಯೂ ಅದನ್ನು ನೋಡಿಕೊಳ್ಳುವುದಕ್ಕೂ ಅದರಲ್ಲಿರಿಸಿದನು.


ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.


ಆದಾಮನು 130 ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಆ ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು